ಬೆಂಗಳೂರು, ಮಾ.10- ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ.
ಮಾ.23ರಿಂದ ಏ.6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಸಾರಿಗೆ ನಿಗಮದ ನಗರ, ಹೊರವಲಯದ ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಪರೀಕ್ಷೆ ಮುಗಿದ ನಂತರವೂ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳಗಳಿಗೆ ಉಚಿತವಾಗಿಯೇ ಪ್ರಯಾಣಿಸಬಹುದಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.