ಬೆಳಗಾವಿ, ಡಿ.20-ಉತ್ತರ ಕರ್ನಾಟಕ ಭಾಗಕ್ಕೆ ಸಿಗಬೇಕಾದ ಸ್ಥಾನಮಾನಗಳು ಸಿಗದೆ ಅನ್ಯಾಯ ವಾಗಿದೆ ಎಂದು ವಿಧಾನಪರಿಷತ್ ಹಿರಿಯ ಸದಸ್ಯ ಎಸ್.ಆರ್.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುವರ್ಣಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗಕ್ಕೆ ಸರಿಯಾದ ಸ್ಥಾನಮಾನಗಳು ಸಿಕ್ಕಿವೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡು ಆತ್ಮವಂಚನೆ ಮಾಡಿಕೊಳ್ಳುವ ಕೆಲಸ ನಾನು ಮಾಡುವುದಿಲ್ಲ. ಈ ಭಾಗಕ್ಕೆ ಅನ್ಯಾಯವಾಗಿರುವುದು ನಿಜ ಎಂದು ಹೇಳಿದರು.
ಸಭಾಪತಿ ಸ್ಥಾನ ನನ್ನ ಕೈ ತಪ್ಪಿದ್ದಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಆದರೆ ಇದು ಹೈಕಮಾಂಡ್ನ ನಿರ್ಧಾರ.ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದರು.
ಬಿಜೆಪಿ ನಾಯಕರು ಇಂದು ಬೆಳಗ್ಗೆ ನಡೆಸಿದ ಸಭೆಯಲ್ಲಿ ನಾನು ಭಾಗವಹಿಸಿದ್ದೆ ಎಂಬುದು ತಪ್ಪು ಮಾಹಿತಿ. ನಾನು ಯುಕೆ-27 ಹೊಟೇಲ್ನಲ್ಲಿ ಉಳಿದುಕೊಂಡಿದ್ದೇನೆ.ನಾನು ಇಂದು ಬೆಳಗ್ಗೆ ರೆಡಿಯಾಗಿ ಅಲ್ಲಿಂದಲೇ ಬಂದೆ.ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದರೇನೋ ಗೊತ್ತಿಲ್ಲ ಎಂದು ಹೇಳಿದರು.