ಬೆಂಗಳೂರು, ಮಾ.10-ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅಪಾಯದಿಂದ ಪಾರಾಗಿದ್ದಾರೆ. ಇಂತಹ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಇಂದಿಲ್ಲಿ ತಿಳಿಸಿದರು.
ನಗರದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಶ್ವನಾಥ್ ಶೆಟ್ಟಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನುಷ ಕೃತ್ಯ. ನ್ಯಾಯಮೂರ್ತಿಗಳಿಗೆ ಇಂತಹ ಕೃತ್ಯವೆಸಗಿದವರಿಗೆ ಮೊದಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ತನಿಖೆ ಕೈಗೊಂಡಿರುವ ಅಧಿಕಾರಿಗಳಿಗೂ ಭದ್ರತೆ ಒದಗಿಸಬೇಕು ಎಂದರು.