ಬೆಳಗಾವಿ(ಸುವರ್ಣಸೌಧ), ಡಿ.21- ಪ್ರಸಕ್ತ ಸಾಲಿನಲ್ಲಿ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ವಿಧಾನಸಭೆಗೆ ತಿಳಿಸಿದರು.
ವಿಧಾನಸಭೆಯಲ್ಲಿ ಮಂಡನೆಯಾದ ಪ್ರಶ್ನೋತ್ತರದಲ್ಲಿ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ 400 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳನ್ನು ಪಶುಚಿಕಿತ್ಸಾಲಯಗಳನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಅಗತ್ಯವಿದೆ. ಇದರಿಂದ 3402 ಪಶುಚಿಕಿತ್ಸಾಲಯಗಳು ಕಾರ್ಯನಿರ್ವಹಿಸಿದಂತಾಗುತ್ತವೆ. ರಾಜ್ಯದಲ್ಲಿರುವ 810 ಪ್ರಾಥಮಿಕ ಪಶುಚಿಕಿತ್ಸಾ ಕೇಂದ್ರವನ್ನು 2019-20 ಮತ್ತು 2020-21ನೇ ಸಾಲಿಗೆ ಪಶುಚಿಕಿತ್ಸಾಲಯಗಳನ್ನಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು.ರಾಜ್ಯದಲ್ಲಿ 4212 ಪಶು ಆಸ್ಪತ್ರೆ ಮತ್ತು ಪಶುಚಿಕಿತ್ಸಾಲಯಗಳನ್ನು ನಿರ್ಮಿಸಿ ಕೃಷಿ ಆಯೋಗದ ಶಿಫಾರಿಸಿನಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.