ಬೆಳಗಾವಿ,ಡಿ.22- ರಮೇಶ್ ಜಾರಕಿ ಹೊಳಿ ಅವರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯವಾಡಿದ್ದಾರೆ.
ರಮೇಶ್ ಸರ್ ಅವರಿಗೆ ಸಚಿವ ಸ್ಥಾನದಿಂದ ಕೊಕ್ ಕೊಟ್ಟಿದ್ದು ದುಃಖವಾಗಿದೆ. ಇಷ್ಟು ಬೇಗ ರಮೇಶ್ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬಾರದಿತ್ತು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯ ವಾಡಿದ್ದಾರೆ.
ಹಿಂದಿನಿಂದಲೂ ಜಾರಕಿ ಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಸಚಿವ ಡಿ.ಕೆ. ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ಮೂಲಕ ಬೆಳಗಾವಿ ರಾಜಕೀಯದಲ್ಲಿ ವಿನಾ ಕಾರಣ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದೇ ರಮೇಶ್ ಜಾರಕಿಹೊಳಿ ಆರೋಪಿಸಿ ಪಕ್ಷದ ಮುಖಂಡರೊಂದಿಗೆ ಮುನಿಸಿಕೊಂಡಿದ್ದರು.
ಇದೀಗ ರಮೇಶ್ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅಯ್ಯೋ ಪಾಪ ಎನ್ನುವ ರೀತಿಯಲ್ಲಿ ವ್ಯಂಗ್ಯವಾಡಿದ್ದಾರೆ.