ಬೆಂಗಳೂರು,ಡಿ.22- ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತರಿಗೆ ಗಾಳ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ.
ಆಪರೇಷನ್ ಕಮಲದ ಮೂಲಕ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಆಗಿದ್ದಾಂಗೆ ಪ್ರಯತ್ನಿಸುತ್ತಿದೆಯಾದರೂ ಪ್ರತಿ ಬಾರಿಯೂ ಮುಖಭಂಗ ಅನುಭವಿಸುತ್ತಲೇ ಬಂದಿದೆ.
ಆದರೂ ಬಿಜೆಪಿ ಪಟ್ಟು ಸಡಿಲಿಸದೆ ಇದೀಗ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ. ಸಚಿವ ಸ್ಥಾನ ಕೈ ತಪ್ಪಿದ ಅತೃಪ್ತರನ್ನು ಸೆಳೆಯಲು ಬಿಜೆಪಿ ಕಾರ್ಯ ತಂತ್ರ ರೂಪಿಸಿದೆ.
ಈಗಾಗಲೇ ಈ ನಿಟ್ಟಿನಲ್ಲಿ ಶಾಸಕಾಂಗ ಸಭೆಯನ್ನೂ ಕರೆದಿದ್ದು, ಇಲ್ಲಿ ಈ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳು ದಟ್ಟವಾಗಿದೆ.
ರಮೇಶ್ ಜಾರಕಿಹೊಳಿ ಬಿಜೆಪಿ ಪಾಳೆಯದಲ್ಲಿ ಆಗಾಗ್ಗೆ ಕಾಣಿಸಿಕೊಂಡು ತೀವ್ರ ಕುತೂಹಲ ಮೂಡಿಸಿದ್ದರು. ಇದೀಗ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿದ್ದು, ಬಿಜೆಪಿ ತೆಕ್ಕೆಗೆ ರಮೇಶ್ ಸರಿಯಲಿದ್ದಾರೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಮತ್ತೊಂದೆಡೆ ಕಾಂಗ್ರೆಸ್ ಅತೃಪ್ತರನ್ನು ಸಮಾಧಾನಗೊಳಿಸಲು ಯತ್ನಿಸುತ್ತಿದ್ದು, ಇತ್ತ ಬಿಜೆಪಿ ಅತೃಪ್ತರನ್ನು ಸೆಳೆಯಲು ಮುಂದಾಗಿದೆ.