ಬೆಂಗಳೂರು, ಡಿ.22-ಪಕ್ಷನಿಷ್ಠೆ ಹಾಗೂ ಪ್ರಾಮಾಣಿಕ ಸೇವೆ ಪರಿಗಣಿಸಿ ತಮಗೆ ಸಚಿವ ಸ್ಥಾನ ನೀಡಲಾಗುತ್ತಿದೆ. ಯಾವುದೇ ಖಾತೆಯನ್ನು ನಾನು ನಿರೀಕ್ಷೆ ಮಾಡಿಲ್ಲ. ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವೆ ಎಂದು ಎಂ.ಟಿ.ಬಿ.ನಾಗರಾಜ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬಗೆಗಿನ ನಿಷ್ಠೆ, ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕ ಪ್ರಯತ್ನ, ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ನಾವು ಸಲ್ಲಿಸಿದ ಸೇವೆಯನ್ನು ಮನಗಂಡು ರಾಜ್ಯ ನಾಯಕರು ನಮಗೆ ಈ ಬಾರಿ ಅವಕಾಶ ನೀಡಿದ್ದಾರೆ.
ಈ ಹಿಂದೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನಮಗೆ ಅವಕಾಶ ನೀಡದಿದ್ದಾಗ ಬಂಡಾಯ ಬಾವುಟ ಹಾರಿಸಿರಲಿಲ್ಲ. ಕಾಂಗ್ರೆಸ್ನ ಬಲವರ್ಧನೆಗೂ ನಿರಂತರವಾಗಿ ಶ್ರಮಿಸಿದ್ದೇವೆ ಎಂದರು.
ನಮಗೆ ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ತಿಳಿಸಿದರು.
ಕಾರ್ಯಕರ್ತರಲ್ಲಿ ಸಂಭ್ರಮ:
ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುತ್ತಿರುವ ಹಿನ್ನೆಲೆಯಲ್ಲಿ ಅವರ ಕುಟುಂಬ, ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು, ಸ್ನೇಹಿತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.