ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಭೂಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕುರಿತು ಚರ್ಚಿಸಿದರು.

ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಈ.ವಿ. ರಮಣ ರೆಡ್ಡಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ