ಬೆಂಗಳೂರು, ಡಿ.27- ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ವಾಸವಿ ಕಾಂಡಿಮೆಂಟ್ಸ್ ವತಿಯಿಂದ ಅವರೆ ಬೇಳೆ ಮೇಳವನ್ನು ಇದೇ 29ರಂದು ಸಜ್ಜನ್‍ರಾವ್ ಸರ್ಕಲ್‍ನಲ್ಲಿ ಆಯೋಜಿಸಲಾಗಿದೆ.
ಮಾಗಡಿ ರೈತರು ಬೆಳೆದ ಅವರೆಕಾಯಿಂದ ಮಾಡಿದ ವಿವಿಧ ತಿನಿಸುಗಳನ್ನು ವಾಸವಿ ಕಾಂಡಿಮೆಂಟ್ಸ್ ಪರಿಚಯಿಸುತ್ತಿದ್ದು, ನೂತನವಾಗಿ ಆನ್‍ಲೈನ್ ಸ್ಟೋರ್ ಉದ್ಘಾಟನೆಗೊಳ್ಳಲಿದೆ.
ಅಂದು ಬೆಳಗ್ಗೆ 10.30ಕ್ಕೆ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ದಿವ್ಯ ಸಾನ್ನಿಧ್ಯದೊಂದಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಉದ್ಘಾಟನೆ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಉದಯಗರುಡಾಚಾರ್, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಬಿಬಿಎಂಪಿ ಸದಸ್ಯೆ ವಾಣಿ ವಿ.ರಾವ್, ಅದಮ್ಯ ಚೇತನ ಫೌಂಡೇಶನ್ ಅಧ್ಯಕ್ಷರಾದ ತೇಜಸ್ವಿನಿ ಅನಂತ್‍ಕುಮಾರ್ ಪಾಲ್ಗೊಳ್ಳಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಶಾಸಕರಾದ ರಾಮಲಿಂಗಾರೆಡ್ಡಿ, ಟಿ.ಎ.ಶರವಣ, ಎಂ.ಮಂಜುನಾಥ್, ನಟಿ ತಾರಾ ಅನುರಾಧ, ಕೆಪಿಸಿಸಿ ಮುಖ್ಯ ಕಾರ್ಯದರ್ಶಿ ಡಾ.ಬಿ.ಎಸ್.ಶಿವಣ್ಣ, ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್, ಮಾಜಿ ಶಾಸಕರಾದ ಆರ್.ವಿ.ದೇವರಾಜ್, ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್, ಪಾಲಿಕೆ ಆಯುಕ್ತ ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮೇಳವು ಡಿ.29ರಿಂದ ಜ.8ರವರೆಗೆ ಬೆಳಗ್ಗೆ 11 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಡೆಯಲಿದೆ.