ಬೆಂಗಳೂರು,ಡಿ.28-ನೂತನವಾಗಿ ಆಯ್ಕೆಯಾಗಿರುವ ಕರ್ನಾಟಕ ಕೇಡರ್ನ ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಳ್ಳಾರಿ ಜಿಲ್ಲೆಯ ಹಂಪಿ ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿಮಿ ಮರಿಯಮ್ ಜಾರ್ಜ್, ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪ ವಿಭಾಗದ ಎಎಸ್ಪಿಯಾಗಿ ಹಕಾಯ್ ಅಕ್ಷಯ್ ಮಚ್ಚಿಂದ್ರ, ಮಂಗಳೂರು ನಗರದ ಪಣಂಬೂರು ಉಪ ವಿಭಾಗದ ಎಎಸ್ಪಿಯಾಗಿ ಆರ್.ಶ್ರೀನಿವಾಸ ಗೌಡ ಮತ್ತು ಉಡುಪಿ ಜಿಲ್ಲೆಯ ಕಾರ್ಕಳ ಉಪ ವಿಭಾಗಗಕ್ಕೆ ಪಿ.ಕೃಷ್ಣಕಾಂತ್ ಅವರನ್ನು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ನಿಯೋಜಿಸಲಾಗಿದೆ.