ಬೆಂಗಳೂರು, ಡಿ.30- ಡಾ.ಶಿವಮೊಗ್ಗ ಸುಬ್ಬಣ್ಣ 120 ಫರ್ಸೆಂಟ್ ಸಜ್ಜನ ವ್ಯಕ್ತಿ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಡಾ.ಚಂದ್ರಶೇಖರ ಕಂಬಾರ ಇಂದಿಲ್ಲಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ನಗರದಲ್ಲಿ ಆಯೋಜಿಸಲಾಗಿದ್ದ ಸುಗಮ ಸಂಗೀತ ಸಂಪತ್ತು ಡಾ.ಶಿವಮೊಗ್ಗ ಸುಬ್ಬಣ್ಣ ಎಂಬತ್ತು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇವರನ್ನು ನೆನೆಸಿಕೊಳ್ಳುವ ರೀತಿ ಸುಬ್ಬಣ್ಣ ಅವರನ್ನು ನೆನೆಸಿಕೊಳ್ಳುತ್ತೇವೆ. ಅವರು ಆದರ್ಶ ವ್ಯಕ್ತಿ, 80ರ ವಯಸ್ಸಿನಲ್ಲೂ ಅವರ ಹುಟ್ಟುಹಬ್ಬವನ್ನು ಎಲ್ಲರೊಂದಿಗೆ ಆಚರಿಸಿಕೊಳ್ಳುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು.