ಬೆಂಗಳೂರು, ಡಿ.31- ಫ್ಲೈಓವರ್ ಮೇಲೆ ಕೆಟ್ಟು ನಿಂತಿದ್ದ ಲಾರಿ ಗಮನಕ್ಕೆ ಬಾರದೆ ಬೈಕ್ ಚಾಲನೆ ಮಾಡಿಕೊಂಡು ಬಂದು ಸವಾರ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನ ಮೂಲದ ಸಂದೀಪ್(31) ಮೃತಪಟ್ಟ ಬೈಕ್ ಸವಾರ.
ನಗರದ ಮಾರುತಿನಗರದಲ್ಲಿ ವಾಸವಾಗಿದ್ದ ಸಂದೀಪ್ ರಾತ್ರಿ 10.30ರಲ್ಲಿ ಜಕ್ಕೂರು-ಬ್ಯಾಟರಾಯನಪುರ ನಡುವಿನ ಫ್ಲೈಓವರ್ ಮೇಲೆ ಬೈಕ್ನಲ್ಲಿ ಹೋಗುತ್ತಿದ್ದರು.
ಈ ಫ್ಲೈಓವರ್ನಲ್ಲಿ ಲಾರಿ ಕೆಟ್ಟು ನಿಂತಿರುವುದು ಗಮನಕ್ಕೆ ಬಾರದೆ ಸಂದೀಪ್ ಬೈಕ್ ಚಾಲನೆ ಮಾಡುತ್ತಾ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.
ಪರಿಣಾಮವಾಗಿ ಗಂಭೀರ ಗಾಯಗೊಂಡ ಸಂದೀಪ್ನನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಹೆಬ್ಬಾಳ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.