ಶ್ರೀಗಳು ಆರೋಗ್ಯವಾಗಿದ್ದಾರೆ, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ ಶ್ರೀಗಳ ಆಪ್ತ ವೈದ್ಯರು

ತುಮಕೂರು,ಜ.2- ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ದಿನೇ ದಿನೇ ಚೇತರಿಕೆ ಕಂಡು ಬರುತ್ತಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್ವರಪ್ಪ ತಿಳಿಸಿದ್ದಾರೆ.

ಇಂದು ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಮತ್ತು ಶ್ರೀಗಳ ಆಪ್ತ ವೈದ್ಯ ಪರಮೇಶ್ವರಪ್ಪ ತಂಡ ಶ್ರೀಗಳ ರಕ್ತ ಮಾದರಿ ಪರೀಕ್ಷೆ ನಡೆಸಿತು. ನಿನ್ನೆಯೂ ಶ್ರೀಗಳ ರಕ್ತ ಮಾದರಿ ಪರೀಕ್ಷೆ ನಡೆಸಲಾಗಿತ್ತು.ಇಂದಿನ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿದೆ.

ಶ್ರೀಗಳ ಆರೋಗ್ಯದಲ್ಲಿ ದಿನೇ ದಿನೇ ಚೇತರಿಕೆ ಕಂಡು ಬರುತ್ತಿದೆ.ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ದ್ರವಾಹಾರವನ್ನು ಸ್ವೀಕರಿಸುತ್ತಿದ್ದಾರೆ. ಸೋಂಕು ಕೂಡಾ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ