ಬೆಂಗಳೂರು: ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.
ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಅವರು ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜಾವಬ್ದಾರಿ. ಜನ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುನ್ನು ನೋಡಬೇಕು. ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ ಎಂದು ಕಟು ಪದಗಳಿಂದ ಕೇರಳ ಸರ್ಕಾರದ ನಡೆಯನ್ನು ಅನಂತ್ ಕುಮಾರ್ ಹೆಗ್ಡೆ ಟೀಕಿಸಿದರು.
ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದರು.
44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.