ಖಾಸಗಿ ಶಾಲೆಯ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದು ಏಳು ಮಂದಿ ಮೃತ

ಶಿಮ್ಲಾ, ಜ.5 (ಪಿಟಿಐ)- ಖಾಸಗಿ ಶಾಲೆಯೊಂದರ ಬಸ್ಸೊಂದು ಆಳವಾದ ಕಂದಕಕ್ಕೆ ಉರುಳಿಬಿದ್ದು, ಆರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟ ದುರಂತ ಇಂದು ಬೆಳಗ್ಗೆ ಹಿಮಾಚಲ ಪ್ರದೇಶದ ಸಿರ್‍ಮೌರ್ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಘಟನೆಯಲ್ಲಿ ಇತರ 12 ಮಂದಿ ಗಾಯಗೊಂಡಿದ್ದಾರೆ.

ಸಂಗ್ರಾ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ಡಿಎವಿ ಶಾಲೆಯ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿತ್ತು. ಈ ದುರಂತದಲ್ಲಿ ಆರು ಶಾಲಾ ವಿದ್ಯಾರ್ಥಿಗಳು ಮತ್ತು ಬಸ್ ಚಾಲಕ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಮಲ್ಪಾನಿ ತಿಳಿಸಿದ್ದಾರೆ.
ಈ ಘಟನೆಯಲ್ಲಿ ಗಾಯಗೊಂಡ ಇತರೆ 12 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ