ಬೆಂಗಳೂರು: ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್ಗೆ ಕರೆಕೊಟ್ಟಿದೆ.
ಎಐಟಿಯುಸಿ, ಸಿಐಟಿಯು, ಐಎನ್ಟಿಯುಸಿ, ಎಲ್ಪಿಎಫ್ ಕಾರ್ಮಿಕ ಸಂಘಟನೆಗಳು ಬಂದ್ಗೆ ಕರೆ ಕೊಟ್ಟಿದ್ದು, 12 ಬೇಡಿಕೆ ಮುಂದಿಟ್ಟು ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ರಂದು ಬೀದಿಗಿಳಿಯಲಿವೆ. ಬಿಎಂಟಿಸಿ ಹಾಗೂ ಕೆಎಸ್ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್ ಗಳು ಸ್ತಬ್ಧವಾಗಲಿದೆ ಅಂತ ಸಿಐಟಿಯು ಉಪಾಧ್ಯಕ್ಷ ಅನಂತ್ ಸುಬ್ಬರಾವ್ ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಆರು ಗಂಟೆಯಿಂದ ಬುಧವಾರ ಸಂಜೆ ಐದು ಗಂಟೆಯವರೆಗೂ ಬಂದ್ ನಡೆಯಲಿದ್ದು, ಈಗಾಗಲೇ ಮೋದಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವೂ ಬೆಂಬಲ ಕೊಟ್ಟಿದೆ ಎಂದು ತಿಳಿದುಬಂದಿದೆ.