ಜ.20ರಂದು ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆಯಲ್ಲಿ ಪಾಸಾಗಿ ಸಂದರ್ಶನಕ್ಕೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಆಯೋಜಿಸಲಾಗಿರುವ ಮಾಕ್ ಸಂದರ್ಶನ

ಬೆಂಗಳೂರು,ಜ.6- ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಂದರ್ಶನಕ್ಕೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಮಾಕ್ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಈ ಮಾಕ್ ಸಂದರ್ಶನ ಬೆಂಗಳೂರು ನಗರದ ಗಾಂಧೀನಗರದಲ್ಲಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಸಮೀಪವಿರುವ ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್ ಅವರ ಕಚೇರಿಯಲ್ಲಿ ಜ.20ರಂದು ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ನಡೆಸುವ ಸಂದರ್ಶನಕ್ಕೆ ಹಾಜರಾಗಲಿರುವ ಅರ್ಹ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಲು ಈ ಮಾಕ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಸಂದರ್ಶನಕ್ಕೆ ಬರುವ ಅರ್ಹ ಅಭ್ಯರ್ಥಿಗಳಿಗೆ ಟಿಎ, ಡಿಎ ಭತ್ಯೆಗಳನ್ನು ನೀಡಲಾಗುವುದು ಹಾಗೂ ಕೇಂದ್ರ ಲೋಕಸೇವಾ ಆಯೋಗ ಫೆಬ್ರವರಿಯಲ್ಲಿ ನಡೆಸುವ ಸಂದರ್ಶನಕ್ಕೆ ಹಾಜರಾಗುವ ಅರ್ಹ ಅಭ್ಯರ್ಥಿಗಳನ್ನು  ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು.
ಈ ಮಾಕ್ ಸಂದರ್ಶನದಲ್ಲಿ ಹಲವಾರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಐಎಎಸ್, ಐಪಿಎಸ್ ಅಧಿಕಾರಿಗಳು ಇರಲಿದ್ದಾರೆ.
ಸಂದರ್ಶನಕ್ಕೆ ಬರಲಿಚ್ಚಿಸುವ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ರವಿ ಡಿ.ಚೆನ್ನಣ್ಣನವರ್ ಫ್ಯಾನ್ಸ್ ಪೇಜ್ ಸಂಪರ್ಕಿಸಿ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ