ಬಿಜೆಪಿ ವಿಜಯ ಲಕ್ಷ್ಯ-2019 ಕಾರ್ಯಕರ್ತರ ಕಾರ್ಯಾಗಾರ ಉದ್ಘಾಟನೆ

ಬೆಂಗಳೂರು: 2019ರ ಲೋಕಸಭಾ ಚುನಾವಣಾ ತಯಾರಿ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಕೈಗೊಂಡಿರುವ ‘ವಿಜಯ ಲಕ್ಷ್ಯ-2019’ ಯೋಜನೆಯಡಿ ಕಾರ್ಯ ನಿರ್ವಹಿಸಲಿರುವ ಕಾರ್ಯಕರ್ತರ ಕಾರ್ಯಾಗಾರವನ್ನು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಉದ್ಘಾಟಿಸಲಾಯಿತು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್ , ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಭಾರಿಗಳಾದ ಮಧು ಕೇಶವ ದೇಸಾಯಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ವೈ.ವಿಜಯೇಂದ್ರ, ತಮ್ಮೇಶ್ ಗೌಡ, ಬಸವರಾಜ ಯಂಕಚಿ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 400 ಯುವಕರು ಕಾರ್ಯಾಗಾರದಲ್ಲಿ ಭಾಗವಹಿಸದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ