ಆಸ್ಟ್ರೇಲಿಯಾ ನೆಲದಲ್ಲಿ ಕೊಹ್ಲಿ ಪಡೆಗೆ ಐತಿಹಾಸಿಕ ಗೆಲುವು

ಸಿಡ್ನಿಸಿಡ್ನಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್​ ಮಳೆಯ ಕಾರಣದಿಂದ ಡ್ರಾನಲ್ಲಿ ಅಂತ್ಯವಾಯಿತು. ಈ ಮೂಲಕ ಭಾರತ ಕ್ರಿಕೆಟ್​ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿತು.

1947ರಿಂದ ಭಾರತ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್​ ಸರಣಿ​ ಆಡುತ್ತಿದೆ. ಆದರೆ, ಅವರ ನೆಲದಲ್ಲಿ ಸರಣಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ, ಈಗ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡ ಗೆಲುವಿನ ನಗೆ ಬೀರಿದೆ. 2-1 ಅಂತರದಿಂದ ಸರಣಿಯನ್ನು ತನ್ನದಾಗಿಸಿಕೊಂಡಿತು.

ಮೊದಲ ಹಾಗೂ ಮೂರನೇ ಪಂದ್ಯವನ್ನು ಭಾರತ ಗೆದ್ದು ಬೀಗಿದರೆ, ಎರಡನೇ ಮ್ಯಾಚ್​ಅನ್ನು ಆಸ್ಟ್ರೇಲಿಯಾ ಗೆದ್ದಿತ್ತು. ಈಗ ನಾಲ್ಕನೇ ಟೆಸ್ಟ್​ ಮಳೆಯ ಕಾರಣ ರದ್ದಾದ ಹಿನ್ನೆಲೆಯಲ್ಲಿ ಪಂದ್ಯ ಡ್ರಾನಲ್ಲಿ ಅಂತ್ಯಕಂಡಿದೆ.

ಅಂತಿಮ ಟೆಸ್ಟ್​​ನಲ್ಲಿ ಮೊದಲು ಬ್ಯಾಟಿಂಗ್​ ಆರಂಭಿಸಿದ ಕೊಹ್ಲಿ ಪಡೆ, 626ರನ್​ಗಳ ಬೃಹತ್ ಮೊತ್ತ ಪೇರಿಸಿತ್ತು. ನಂತರ ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ 300 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಒಪ್ಪಿಸಿತ್ತು. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 6ರನ್​ ಗಳಿಸಿ ಆಡುತ್ತಿತ್ತು. ಆದರೆ, ಭಾನುವಾರ ಬ್ಯಾಡ್​ಲೈಟ್​ ಎನ್ನುವ ಕಾರಣಕ್ಕೆ ಪಂದ್ಯ ಮುಂದೂಡಲಾಗಿತ್ತು.  ಇಂದು ಮಳೆ ಕಾರಣ ಪಂದ್ಯ ರದ್ದು ಮಾಡಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ