ಬೆಂಗಳೂರು, ಮಾ.12- ಎರಡು ಬೈಕ್ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಾಗಯ್ಯನಪಾಳ್ಯ ನಿವಾಸಿ ಜಮೀರ್ ಅಹಮದ್ (23) ಮೃತಪಟ್ಟ ಬೈಕ್ ಸವಾರ.
ಕಾರು ವಾಶಿಂಗ್ ವೃತ್ತಿ ಮಾಡುತ್ತಿದ್ದ ಜಮೀರ್ ಅಹಮದ್ ರಾತ್ರಿ 10.45ರಲ್ಲಿ ಬಾಣಸವಾಡಿ ಮುಖ್ಯರಸ್ತೆಯ ಮಾಲ್ ಸಮೀಪ ಬೈಕ್ನಲ್ಲಿ ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಎರಡೂ ಬೈಕ್ಗಳ ಸವಾರರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಜಮೀರ್ ಅಹಮದ್ ಗಂಭೀರ ಗಾಯಗೊಂಡರು. ತಕ್ಷಣ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮತ್ತೊಂದು ಬೈಕ್ ಸವಾರ ಸಣ್ಣಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬಾಣಸವಾಡಿ ಸಂಚಾರಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.