ನಾಳೆ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದಿಂದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

ಬೆಂಗಳೂರು, ಜ.9-ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟ ನಾಳೆ (ಜ.10) ಬೆಳಗ್ಗೆ 11 ಗಂಟೆಗೆ ಪುರಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಒಕ್ಕೂಟದ ಗೌರವ ಕಾರ್ಯದರ್ಶಿ ಕಿರಣ್ ಕಮಲಪ್ರಸಾದ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರ ಜೀತ ಕುರಿತ ಹೊಸ ಕ್ರಿಯಾ ಯೋಜನೆಯನ್ನು ತಕ್ಷಣ ಹಿಂಪಡೆಯಬೇಕು, ನೂತನ ಸೂಕ್ತ ಸಮಂಜಸ ಸಮಗ್ರ ಕ್ರಿಯಾ ಯೋಜನೆಯನ್ನು ಅತಿ ಶೀಘ್ರದಲ್ಲೇ ಹೊರತರಬೇಕು, ನೂತನ ಜೀತ ಕುರಿತ ಕ್ರಿಯಾ ಯೋಜನೆಯಲ್ಲಿ 2008ರ ಕ್ರಿಯಾಯೋಜನೆಯ ಮಾದರಿಯನ್ನು ಅನುಸರಿಸಬೇಕು.

5,730ಜೀತದಾಳುಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಾರ್ಗದರ್ಶನ ಅನುಸರಿಸಿ ನ್ಯಾಯ ಒದಗಿಸಬೇಕು, ಜೀತದಾಳುಗಳಿಗೆ ನ್ಯಾಯ ಒದಗಿಸಲು ಶ್ರಮಿಸುತ್ತಿರುವವರಿಗೆ ರಕ್ಷಣೆ ಮತ್ತು ಜೀವನ ಭದ್ರತೆ ಒದಗಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸುವುದಾಗಿ ತಿಳಿಸಿದರು.

ಜೀತವಿಲ್ಲ ಎಂದು ಸಾರಿರುವ 21 ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳನ್ನು ಜೀತ ವಿಮುಕ್ತ ಎಂದು ಘೋಷಿಸಬೇಕು.ಪ್ರತಿ ಜೀತದಾಳುಗೆ  5 ಎಕರೆ ಜಮೀನು ನೀಡಿ ವ್ಯವಸಾಯ ಮಾಡಲು ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸುದಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ