ಎಂಟನೇ ತರಗತಿವರೆಗೆ ಹಿಂದಿ ಕಡ್ಡಾಯ; ಕೆ. ಕಸ್ತೂರಿ ರಂಗನ್ ಸಮಿತಿ ಶಿಫಾರಸು

ನವದೆಹಲಿ: ಕೆ. ಕಸ್ತೂರಿ ರಂಗನ್ ನೇತೃತ್ವದ ಸಮಿತಿ ಹೊಸ ಶಿಕ್ಷಣ ನೀತಿಯ ಕುರಿತಂತೆ ಕರಡು ವರದಿ ಸಲ್ಲಿಸಿದ್ದು, ಕೆಲವು ಶಿಫಾರಸುಗಳನ್ನು ಮಾಡಿದೆ.

ಕರಡು ವರದಿಯ ಶಿಫಾರಸುಗಳಲ್ಲಿ ಪ್ರಮುಖವಾಗಿ ಎಂಟನೇ ತರಗತಿವರೆಗೆ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದಿದೆ. ಜೊತೆಗೆ ವಿಜ್ಞಾನ ಮತ್ತು ಗಣಿತದಲ್ಲಿ ಏಕರೂಪದ ಪಠ್ಯಕ್ರಮ ಇರಬೇಕು, ಕೌಶಲ್ಯಾಭಿವೃದ್ಧಿಗೆ ಪೂರಕವಾದ ಶಿಕ್ಷಣ ನೀಡಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.ಪ್ರಸ್ತುತ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಭಾಷೆ ಕಡ್ಡಾಯವಾಗಿರಲಿಲ್ಲ. ಪ್ರಮುಖವಾಗಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ, ಗೋವಾ, ಅಸ್ಸೋಂ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಹಿಂದಿ ಆಯ್ಕೆಯ ವಿಷಯವಾಗಿತ್ತು.
ಅವಧಿ, ಭೋಜ್​ಪುರಿ, ಮೈಥಿಲಿ ಭಾಷೆಯನ್ನು ಮಾತನಾಡುವ ಪ್ರದೇಶಗಳಲ್ಲಿ ಆಯಾ ಭಾಷೆಯಲ್ಲಿ ಪಠ್ಯಕ್ರಮ ರಚಿಸಬೇಕು ಎಂದು ವರದಿ ಹೇಳಿದೆ.
ವರದಿ ಸದ್ಯ ಸಂಪೂರ್ಣವಾಗಿ ಸಿದ್ಧವಾಗಿದ್ದು, ಸಮಿತಿಯು ಸದ್ಯದಲ್ಲೇ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್​​ರನ್ನು ಭೇಟಿಯಾಗಲಿದೆ ಎಂದು ತಿಳಿದುಬಂದಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ