ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಉತ್ತರಪ್ರದೇಶದಲ್ಲಿ ಎಸ್ ಪಿ ಹಾಗೂ ಬಿಎಸ್ ಪಿ ಮೈತ್ರಿ ಮಾಡಿಕೊಂಡಿರುವುದರಿಂದ ನಮಗೆ ಯಾವುದೇ ನಿರಾಸೆ ಉಂಟುಮಾಡಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಆಯಾ ಪಕ್ಷದ ಮುಖಂಡರು ಸೇರಿ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಏನು ಮಾಡಬೇಕೆಂದು ನಿರ್ಧರಿಸುತ್ತೇವೆ. ಉತ್ತರಪ್ರದೇಶದ ಜನರ ಸೇವೆ ಮಾಡಲು ಕಾಂಗ್ರೆಸ್ಗೆ ಸಾಕಷ್ಟು ಅವಕಾಶವಿದೆ. ಬಿಎಸ್ಪಿ ಮತ್ತು ಎಸ್ಪಿ ಮುಖಂಡರ ಬಗ್ಗೆ ನನಗೆ ಅಪಾರ ಗೌರವವಿದೆ. ಬೇಕಾಗಿದ್ದನ್ನು ಮಾಡುವ ಹಕ್ಕು ಅವರಿಗೆ ಇದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನ್ನು ರಾಜ್ಯದಲ್ಲಿ ಬಲಪಡಿಸುವ ಜವಾಬ್ದಾರಿ ನಮ್ಮ ಮೇಲೆ ಇದ್ದು, ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಕೀಯ ಮೈತ್ರಿ ಮಾಡಿಕೊಂಡಿದ್ದು ಸಮರ್ಥವಾಗಿ ನಿಭಾಯಿಸುತ್ತಿದೆ. ಬಿಎಸ್ಪಿ-ಎಸ್ಪಿ ಪಕ್ಷಗಳು ಕಾಂಗ್ರೆಸ್ ಬಗ್ಗೆ ಅಸಮಾಧಾನ ಹೊಂದಿವೆ. ಆದರೆ ಅದನ್ನೂ ನಾವು ಖುಷಿಯಿಂದಲೇ ಸ್ವಾಗತಿಸುತ್ತೇವೆ ಎಂದಿದ್ದಾರೆ.
SP-BSP alliance,lok sabha election,rahul gandhi