ಉಗ್ರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೇನೆ ಸಿದ್ಧ: ಬಿಪಿನ್ ರಾವತ್

ನವದೆಹಲಿ: ಗಡಿಯಲ್ಲಿ ಉಗ್ರ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಭಾರತೀಯ ಸೇನೆ ಸಿದ್ಧವಿದೆ ಎಂದು ಸೇನಾ ಮುಖ್ಯಸ್ಥ ಜನರಲ್​ ಬಿಪಿನ್​ ರಾವತ್​ ತಿಳಿಸಿದ್ದಾರೆ.

ದೆಹಲಿಯಲ್ಲಿ ಸೇನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ರಾವತ್​ ಪಾಕಿಸ್ತಾನ ಉಗ್ರರಿಗೆ ನೆರವು ನೀಡುತ್ತಿದೆ. ಭಾರತೀಯ ಸೇನೆ ಉಗ್ರರ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಚೀನಾ ಗಡಿಯಲ್ಲಿ ಶಾಂತಿ ಕಾಪಾಡಲು ಹೊಸ ನಿಯಮಾವಳಿಗಳನ್ನು ರೂಪಿಸಲಾಗಿದೆ. ಚೀನಾ ಗಡಿಯಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

ನಮ್ಮ ಸೈನಿಕರು ಮತ್ತು ಅವರ ಕುಟುಂಬಸ್ಥರು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದ ರಾವತ್, ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಖರೀದಿಸಲಾಗುತ್ತಿದೆ ಮತ್ತು ಸೇನೆಯನ್ನು ಪುನರ್​ರಚಿಸಲಾಗುತ್ತಿದೆ ಎಂದು ರಾವತ್​ ತಿಳಿಸಿದರು.

On Army Day, Gen Bipin Rawat warns Pak: ‘Won’t hesitate in taking

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ