ಬೆಂಗಳೂರು, ಜ.16- ಬೆಂಗಳೂರು ಜಲಮಂಡಲಿಯ ಸಕಾನಿಅ (ಉತ್ತರ-3) ಮತ್ತು ಸಕಾನಿಅ (ಈಶಾನ್ಯ-2) ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್ ಅನ್ನು ನಾಳೆ ಬೆಳಿಗ್ಗೆ 9.30 ರಿಂದ 11 ಗಂಟೆಯವರೆಗೆ ನಡೆಸಲಾಗುತ್ತದೆ.
ನಾಳೆ ಸಕಾನಿಅ (ಉತ್ತರ-3) ಉಪವಿಭಾಗದ ವ್ಯಾಪ್ತಿಗೆ ಬರುವ ಸಹಕಾರನಗರ, ಜಕ್ಕೂರು, ವಿದ್ಯಾರಣ್ಯಪುರ ಸೇವಾಠಾಣೆಗಳಿಗೆ ಸಂಬಂಧಿಸಿದ ವಿವಾದಗಳನ್ನು 8ನೇ ಮುಖ್ಯರಸ್ತೆ, ಡಿ ಬ್ಲಾಕ್, ಸಹಕಾರನಗರ, ಇಲ್ಲಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಉತ್ತರ-3) ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯನಿರ್ವಾಹಕ ಅಭಿಯಂತರರು (ಉತ್ತರ): 22945130. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಉತ್ತರ-3) ಉಪವಿಭಾಗ: 23621888.
ಸಕಾನಿಅ (ಈಶಾನ್ಯ-2) ಉಪವಿಭಾಗದ ವ್ಯಾಪ್ತಿಗೆ ಬರುವ ಕೆ.ಜಿ.ಟವರ್, ಕುಮಾರಪಾರ್ಕ್, ಜಯಮಹಲ್ ಸೇವಾಠಾಣೆಗಳಿಗೆ ಸಂಬಂಧಿಸಿದ ವಿವಾದಗಳನ್ನು 18ನೇ ಕ್ರಾಸ್ ಮಲ್ಲೇಶ್ವರಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯನಿರ್ವಾಹಕ ಅಭಿಯಂತರರು (ಈಶಾನ್ಯ): 22945124. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಈಶಾನ್ಯ-2) ಉಪವಿಭಾಗ: 22945135.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ: 22238888, ಸಹಾಯವಾಣಿ 1916 ಹಾಗೂ ವಾಟ್ಸ್ಆಪ್ ಸಂಖ್ಯೆ: 8762228888 ಗೆ ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯ ಬಳಸಿಕೊಳ್ಳಬಹುದಾಗಿದೆ.