ತುಮಕೂರು,ಜ.17-ಸಿದ್ದಗಂಗಾ ಶ್ರೀಗಳ ಆರೋಗ್ಯ ಯಥಾಸ್ಥಿತಿಯಲ್ಲಿದ್ದು, ಮಠಕ್ಕೆ ಕರೆದೊಯ್ಯುವಂತೆ ಸ್ವಾಮೀಜಿಗಳು ಹಠ ಹಿಡಿದಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.
ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಯಲಿದೆ. ಶ್ವಾಸಕೋಶದ ಸೋಂಕು ಹೊರತು ಪಡಿಸಿದರೆ ಬೇರಾವುದೇ ಆರೋಗ್ಯ ತೊಂದರೆ ಯಿಲ್ಲ. ಶ್ವಾಸಕೋಶದ ಸೋಂಕಿನಿಂದ ತುಂಬಿಕೊಳ್ಳುತ್ತಿರುವ ನೀರನ್ನು ತೆಗೆಯಲಾಗಿದೆ . ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ವರ್ ತಿಳಿಸಿದ್ದಾರೆ.
ಖಾಕಿ ಕಾವಲು:
ಇಂದು ಹಾಸನ, ಚಿತ್ರದುರ್ಗ, ರಾಮನಗರ, ಬೆಂಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸೇರಿದಂತೆ ಇಡೀ ರಾಜ್ಯದ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ತುಮಕೂರಿಗೆ ನಿಯೋಜಿಸಿದ್ದಾರೆ.
ಸಿದ್ದಗಂಗಾ ಮಠದ ಹಿಂಭಾಗದಲ್ಲಿ ಮಾರನಾಯ್ಕ ಪಾಳ್ಯ ಬಳಿ ಬೃಹತ್ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದಾರೆ. ತುಮಕೂರು ನಗರದಲ್ಲಿ ಇರುವ ಎಲ್ಲಾ ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು ಸೇರಿದಂತೆ ಶಾಲಾ ಕಾಲೇಜುಗಳಲ್ಲಿ ಅಲರ್ಟ್ ಮಾಡಲಾಗಿದೆ.
ತುಮಕೂರು ಹೆಲಿಪ್ಯಾಡ್ಗಳನ್ನು ಆರು ಕಡೇ ಅಲರ್ಟ್ ಮಾಡಲಾಗಿದೆ. ಸುಮಾರು 10 ಲಕ್ಷ ಜನರಿಗೆ ಮಾರನಾಯ್ಕಪಾಳ್ಯ ಬಳಿ ಬೂಕ್ಕೆ ಸಿಸ್ಟಂ ರೀತಿಯಲ್ಲಿ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ.
ಇಂದು ಬೆಳಗ್ಗೆ ಮೈಸೂರಿನ ಯದುವೀರ ಒಡೆಯರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳು:
ಮತ್ತೊಂದೆಡೆ ಸಿದ್ದಗಂಗಾ ಮಠದ ವಿದ್ಯಾರ್ಥಿಗಳು, ಭಕ್ತರು ಶ್ರೀಗಳ ದರ್ಶನಕ್ಕೆ ಕಾತರದಿಂದ ಕಾಯುತ್ತಿದ್ದಾರೆ.
ಶ್ರೀಗಳ ದರ್ಶನ ಪಡೆದು ಪುನೀತರಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಭಕ್ತರು ತುದಿಗಾಲಲ್ಲಿ ನಿಂತಿದ್ದು, ಪೆÇಲೀಸರು ತಡೆಹಿಡಿದಿದ್ದಾರೆ.