ಬೆಂಗಳೂರು,ಜ.17- ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬರ್,ಐವಾನ್ ಡಿಸೋಜ, ಕೆ.ಗೋವಿಂದರಾಜು, ವಿಧಾನಸಭಾ ಸದಸ್ಯರಾದ ಅಂಜಲಿ ಹೇಮಂತ್ ನಿಂಬಾಳ್ಕರ್, ಕೌಜಲಗಿ ಮಹಾಂತೇಶ್ ಶಿವಾನಂದ್, ರೂಪಕಲಾ ಎಂ.ಶಶಿಧರ್, ಕೆ.ರಾಘವೇಂದ್ರ ಬಸವರಾಜ್ ಹಿತ್ನಾಳ್ ಹಾಗೂ ಡಿ.ಎಸ್.ಹೂಲಗೇರಿವರು ಸಂಸದೀಯ ಕಾರ್ಯದರ್ಶಿಗಳಾಗಿ ಇಂದು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂಟು ಮಂದಿ ಶಾಸಕರಿಗೂ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣವಚನ ಸ್ವೀಕರಿಸಿದ ನೂತನ ಸಂಸದೀಯ ಕಾರ್ಯದರ್ಶಿಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೂಗುಚ್ಛ ನೀಡಿ ಅಭಿನಂದಿಸಿದರು.
ನಂತರ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಶುಭಕೋರಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರೇಷ್ಮೆ ಸಚಿವ ಸಾ.ರಾ.ಮಹೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್,ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಮಣರೆಡ್ಡಿ, ಸಂಸದೀಯ ಕಾರ್ಯದರ್ಶಿ ದ್ವಾರಕನಾಥ್ ಬಾಬು ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.