ಬೆಂಗಳೂರು,ಜ.17- ಮೇಯರ್ ಗಂಗಾಂಬಿಕೆಯವರು ಕೆಎಂಸಿ ನಿಯಮ ಉಲ್ಲಂಘಿಸಿ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಡೆಸಿದ್ದು, ಈ ಕುರಿತು ಕಾನೂನು ಹೋರಾಟ ನಡೆಸುವ ಕುರಿತು ಮುಖಂಡರೊಂದಿಗೆ ಚರ್ಚಿಸಲಾಗುವುದು ಎಂದು ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ತಿಳಿಸಿದ್ದಾರೆ.
ನಿಯಮದಂತೆ 11 ಮಂದಿ ಸದಸ್ಯರ ಪೈಕಿ ಅಧ್ಯಕ್ಷರ ಆಯ್ಕೆಗೆ ಕನಿಷ್ಟ 6 ಮಂದಿ ಸದಸ್ಯರಿರಬೇಕು. ಆದರೆ ನಾಲ್ಕೈದು ಜನ ಸದಸ್ಯರನ್ನಿಟ್ಟುಕೊಂಡು ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಗಿದೆ ಎಂದು ದೂರಿದರು.
ಈ ಅನ್ಯಾಯದ ವಿರುದ್ಧ ಕಾನೂನು ಹೋರಾಟ ನಡೆಸಲು ಚಿಂತನೆ ನಡೆಸಿದ್ದು, ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.