ಬೆಂಗಳೂರು, ಜ.17- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿರುವ ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರನ್ನು ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ರಾಜ್ಯ ಹೈಕೋರ್ಟ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅವಧಿಯಲ್ಲಿ ದಿನೇಶ್ ಮಾಹೇಶ್ವರಿ ಅವರು ನೀಡಿರುವ ತೀರ್ಪುಗಳು ಅದರಲ್ಲೂ ನಗರದ ಸ್ವಚ್ಛತೆಗೆ ನೀಡಿದ ನಿರ್ದೇಶನ ಸರ್ಕಾರಕ್ಕೆ ಮಾರ್ಗಸೂಚಿಯಂತಿತ್ತು ಎಂದು ಅಭಿಪ್ರಾಯಪಟ್ಟರು.
ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಅವರು ಮುಂದಿನ ವೃತ್ತಿ ಜೀವನಕ್ಕೆ ಶುಭ ಹಾರೈಸಿದರು.