ಲೋಕಸಭಾ ಚುನಾವಣಾ ವೇಳಾಪಟ್ಟಿ ಮಾರ್ಚ್ ಮೊದಲವಾರ ಪ್ರಕಟ ಸಾಧ್ಯತೆ

ನವದೆಹಲಿ: ಲೋಕಸಭಾ ಚುನಾವಣೆಗಾಗಿ ಎಲ್ಲಾ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಕೇಂದ್ರ ಚುನಾವಣಾ ಆಯೋಗ ಮಾರ್ಚ್‌ ಮೊದಲ ವಾರದಲ್ಲಿ ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಸಕ್ತ ಲೋಕಸಭೆಯ ಅವಧಿ ಜೂನ್‌ 3ರಂದು ಕೊನೆಗೊಳ್ಳಲಿದೆ. ಏಪ್ರಿಲ್‌ ಕೊನೆಯ ವಾರ ಹಾಗೂ ಮೇ ಮೊದಲ ಎರಡು ವಾರದಲ್ಲಿ ಲೋಕಸಭಾ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ಚುನಾವಣೆ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆಯ ಜತೆ ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ಮತ್ತು ಅರುಣಾಚಲ ಪ್ರದೇಶ ಹಾಗೂ ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಯನ್ನೂ ಲೋಕಸಭಾ ಚುನಾವಣೆ ಜತೆಗೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

EC may announce Lok Sabha election schedule in March first week: Sources

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ