ಬೆಂಗಳೂರು,ಜ.18- ಕಲಾಬಂಧು ಫೌಂಡೇಷನ್ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತಾದ ಸಾಕ್ಷ್ಯಚಿತ್ರಸಿಡಿ ಬಿಡುಗಡೆ ಸಮಾರಂಭವನ್ನು ಇದೇ 20ರಂದು ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಫೌಂಡೇಷನ್ ಅಧ್ಯಕ್ಷ ಎಚ್.ನರಸಿಂಹರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ರಾಜ್ಯ ಮಟ್ಟದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿಕೊಂಡು ಬರುತ್ತಿದ್ದು,ಇದೇ ಮೊದಲ ಬಾರಿಗೆ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ ಅವರ ಸಾಧನೆಬಗ್ಗೆ ಸಾಕ್ಷ್ಯ ಚಿತ್ರವನ್ನು ನಿರ್ಮಿಸಿದ್ದೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ 2019ರ ಕಲಾಬಂಧು ಪ್ರಶಸ್ತಿನೀಡಿ ಗೌರವಿಸಲಾಗುವುದು.
ಐದು ಜೋಡಿಗಳಗೆ 2019ರ ಆದರ್ಶ ದಂಪತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಹಾವೇರಿಯ ಅಕ್ಕಿ ಮಠದ ಶ್ರೀ ಗುರುಲಿಂಗಸ್ವಾಮೀಜಿ ಸಾನಿಧ್ಯ ವಹಿಸುವರು. ಲೋಕಸಭಾ ಸದಸ್ಯ ವಿ.ಎಸ್.ಉಗ್ರಪ್ಪ ಕಾರ್ಯಕ್ರಮ ಉದ್ಘಾಟಿಸುವರು.ಶಾಸಕ ಎ.ಟಿ.ರಾಮಸ್ವಾಮಿ ಅಧ್ಯಕ್ಷತೆ ವಹಿಸುವರು.
ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಸಿಡಿ ಬಿಡುಗಡೆ ಮಾಡಲಿದ್ದು, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಆದರ್ಶ ದಂಪತಿಪ್ರಶಸ್ತಿ ಪ್ರದಾನ ಮಾಡುವರು.
ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಜಫ್ರುಲ್ಲ ಖಾನ್ ಕಲಾಬಂಧು ವಾರ್ಷಿಕ ಪ್ರಶಸ್ತಿ ನೀಡಲಿದ್ದಾರೆ ಎಂದು ತಿಳಿಸಿದರು.