ಬೆಂಗಳೂರು, ಜ.17- ಸಂಸದೀಯ ಕಾರ್ಯದರ್ಶಿಗಳ ನೇಮಕ ನಿಯಮ ಬಾಹಿರ ಕ್ರಮ ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ನಿಯಮಬಾಹಿರವಾಗಿ ಎಂಟು ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರಿ ಎಂ.ಬಿ.ಆದಿನಾರಾಯಣ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.