ನಾಳೆ ಪ್ರಧಾನಿ ಮೋದಿ ತುಮಕೂರಿಗೆ: ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ

ತುಮಕೂರು: ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ತುಮಕೂರಿಗೆ ಆಗಮಿಸುತ್ತಿದ್ದಾರೆ.

ನಾಳಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಪ್ರಧಾನಿ ಮಠಕ್ಕೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಇಂದು ಸಂಜೆ ವೇಳೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರೂ ಮಠಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ