ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ

ತುಮಕೂರು, ಜ.22- ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರಿಗೆ ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಡಲಾಯಿತು.

ಲಿಂಗೈಕ್ಯರಾದ ತುಮಕೂರಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿಗೂ ಮುನ್ನ ಕಿರಿಯ ಶ್ರೀಗಳಾದ ಸಿದ್ಧಲಿಂಗ ಸ್ವಾಮೀಜಿಯವರಿಗೆ ಬೆತ್ತ, ಕಮಂಡಲ, ಜೋಳಿಗೆ, ರುದ್ರಾಕ್ಷಿ ಸರ ನೀಡುವ ಮೂಲಕ ಪಟ್ಟಾಭಿಷೇಕ ನೆರವೇರಿಸಲಾಯಿತು.

ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮೀಜಿ, ಬಾಳೆಹೊನ್ನೂರು ಸ್ವಾಮೀಜಿ, ಮುರುಘಾಮಠದ ಶ್ರೀ ಮುರುಘಾಶರಣರು, ತರಳಬಾಳು ಜಗದ್ಗುರುಗಳು, ಗದುಗಿನ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರ ನೇತೃತ್ವದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರನ್ನು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರನ್ನಾಗಿ ಮಾಡಿದ ನಂತರ ನೂತನ ಶ್ರೀಗಳ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿಯವರ ಅಂತಿಮ ವಿಧಿ-ವಿಧಾನ ನೆರವೇರಿಸಲಾಗುವುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ