ಸಚಿವಾಲಯ ಅಧಿಕಾರಿ ಮತ್ತು ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋದಿಸಿದ ಸಚಿವರು

ಬೆಂಗಳೂರು, ಜ.25-ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಇಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್ ವಿಧಾನಸೌಧದಲ್ಲಿ ಸಚಿವಾಲಯ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ, ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಹಾಗೂ ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ ಎಂಬ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ