ನವದೆಹಲಿ, ಜ.28- ಭೋಪಾಲ್ ಭೀಕರ ಅನಿಲ ದುರಂತದಲ್ಲಿ ಮೃತಪಟ್ಟವರು ಮತ್ತು ಸಂತ್ರಸ್ತರಿಗೆ ಯೂನಿಯನ್ ಕಾರ್ಬೈಡ್ ಸಂಸ್ಥೆಯಿಂದ ಹೆಚ್ಚುವರಿಯಾಗಿ 7,844 ಕೋಟಿ ರೂ.ಗಳ ಪರಿಹಾರ ದೊರಕಿಸಿಕೊಡುವಂತೆ ಕೇಂದ್ರ ಸರ್ಕಾರ ಕೋರಿರುವ ಮನವಿ ಅರ್ಜಿಯನ್ನು ಏಪ್ರಿಲ್ನಲ್ಲಿ ವಿಚಾರಣೆಗೆ ಒಳಪಡಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
1984ರಲ್ಲಿ ಮಧ್ಯಪ್ರದೇಶದ ಭೋಪಾಲ್ನಲ್ಲಿ ಮಿಥೈಲ್ ಐಸೊಸೈಯನೆಟ್ (ಎಂಐಸಿ) ವಿಷಾನಿಲ ಸೋರಿಕೆಯಾಗಿ 3,000ಕ್ಕೂ ಹೆಚ್ಚು ಮಂದಿ ಮೃತಪಟ್ಟು ಅನೇಕರು ತೀವ್ರ ಅಸ್ವಸ್ಥರಾದರು.
ಭೋಪಾಲ್ ಅನಿಲ ದುರಂತ ಸಂತ್ರಸ್ತರಿಗೆ ಪರಿಹಾರವನ್ನು ಹೆಚ್ಚಿಸಬೇಕೆಂದು ಕೋರಿರುವ ಕೇಂದ್ರ ಸರ್ಕಾರದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪೀಠ, ಏಪ್ರಿಲ್ನಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿತು.