ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ದಿನೇಶ್ ಗುಂಡುರಾವ್

ಬೆಂಗಳೂರು, ಜ.28-ಮೈತ್ರಿ ಸರ್ಕಾರದ ವಿರುದ್ಧ ಮಾತನಾಡಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಎಸ್.ಟಿ.ಸೋಮಶೇಖರ್‍ಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಲ್ಲೇಶ್ವರಂನ ಮಂತ್ರಿ ಸ್ಕ್ವೇರ್ ಬಳಿಯ ಮೆಟ್ರೋ ನಿಲ್ದಾಣದಲ್ಲಿ 6 ಬೋಗಿಗಳ ಮೆಟ್ರೋ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಡಿಎ ಅಧ್ಯಕ್ಷರಾಗಿ ಬೆಂಗಳೂರು ಅಭಿವೃದ್ಧಿ ಕುರಿತಂತೆ ಉಪಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಬಹುದಿತ್ತು. ಅದನ್ನು ಬಿಟ್ಟು ಸಾರ್ವಜನಿಕವಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದರು.

ಪಕ್ಷ ಇವರ ನಡೆಯನ್ನು ಗಂಭೀರವಾಗಿ ಪರಿಗಣಿಸುತ್ತದೆ.ಅವರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಅನಂತ್‍ಕುಮಾರ್ ಹೆಗಡೆ ಅವರ ಮಂತ್ರಿಮಂಡಲದ ಸಾಧನೆಗಳೇನು?ಅವರು ರಾಜ್ಯಕ್ಕೆ ಏನು ಮಾಡಿದ್ದಾರೆ ಎಂದು ಹೇಳುವುದಿಲ್ಲ. ನನ್ನ ಮನೆಯ ವಿಚಾರಕ್ಕೆ ಬಂದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದರಿಂದಲೇ ಅವರಿಗೆ ಸಂಸ್ಕøತಿ ಇಲ್ಲ ಎಂಬುದು ತೋರಿಸುತ್ತದೆ.ರಾಜಕಾರಣಿಗಳು ರಾಜಕೀಯವಾಗಿ ಟೀಕೆ, ಟಿಪ್ಪಣಿ ಮಾಡಬೇಕು.ಈ ರೀತಿ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಬಾರದು.ಬಿಜೆಪಿಯವರು ಅವರನ್ನು ಏಕೆ ಮಂತ್ರಿ ಮಾಡಿದ್ದಾರೆ? ಅವರ ಕ್ವಾಲಿಫಿಕೇಷನ್ ಏನು ?ನನಗೆ ಅರ್ಥವಾಗುತ್ತಿಲ್ಲ ಎಂದರು.

ಅವರ ಪಕ್ಷದವರು ಇಂತಹ ಹೇಳಿಕೆಗಳನ್ನು ನೀಡಿದಾಗ ಅವರಿಗೆ ಛೀಮಾರಿ ಹಾಕಬೇಕು. ಆದರೆ ಬಿಜೆಪಿಯವರು ಆ ಕೆಲಸ ಮಾಡುತ್ತಿಲ್ಲ ಎಂದು ಕಿಡಿಕಾರಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ