ಮಾಜಿ ರಕ್ಷಣಾ ಸಚಿವರಾಗಿದ್ದ ಕರ್ನಾಟಕದ ಜಾರ್ಜ್​ ಫರ್ನಾಂಡಿಸ್ ಇನ್ನಿಲ್ಲ

ನವದೆಹಲಿ: ವಾಜಪೇಯಿ ಸರ್ಕಾರದ ಅವಧಿಯಲ್ಲಿ ರಕ್ಷಣಾ ಸಚಿವರಾಗಿದ್ದ ಕರ್ನಾಟಕದ ಜಾರ್ಜ್​ ಫರ್ನಾಂಡಿಸ್​ ಅವರು ಇಂದು ಕೊನೆ ಉಸಿರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಅಲ್ಲದೇ ಕರ್ನಾಟದ ಹಿರಿಯ ರಾಜಕಾರಣಿ ಅಗಲಿಕೆಯಿಂದ ದೇಶಕ್ಕೆ ಅಪಾರ ನಷ್ಟವಾಗಿದೆ. ಜತೆಗೆ ತಮ್ಮ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಕಳೆದ ಕೆಲ ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ವಾಜಪೇಯಿ ಸರ್ಕಾರದ ಅವಧಿಯಲ್ಲಿ ಕಾರ್ಗಿಲ್​ ಯುದ್ಧ ನಡೆದಿತ್ತು. ಈ ವೇಳೆ ಪಾಕಿಸ್ತಾನದ ವಿರುದ್ಧ ಭಾರತ ಗೆದ್ದಿತ್ತು. ಈ ಯುದ್ಧವನ್ನು ಸಮರ್ಥವಾಗಿ ನಿರ್ವಹಿಸಿದ ಖ್ಯಾತಿ ಜಾರ್ಜ್​ ಫರ್ನಾಂಡಿಸ್​ ಅವರಿಗಿದೆ.

ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್ 1930 ಜೂನ್ 3 ರಂದು ಜನಿಸಿದ್ದರು. ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದರು. ಸಮತಾ ಪಕ್ಷದ ಸಂಸ್ಥಾಪಕರು. ತುರ್ತು ಪರಿಸ್ಥಿತಿ ವಿರೋಧಿ ಮತ್ತು ನಾಗರಿಕ ಹಕ್ಕುಗಳ ಹೋರಾಟ, ಸಮಾಜ ಸೇವೆಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಜಾರ್ಜ್ ಫರ್ನಾಂಡಿಸ್ ಮೊರಾರ್ಜಿ ದೇಸಾಯಿ ನೇತೃತ್ವದ ಸರ್ಕಾರ 1997ರಿಂದ 1980ರವರೆಗೆ ಅಧಿಕಾರದಲ್ಲಿದ್ದಾಗ ಸಚಿವರಾಗಿ ಸೇವೆ ಸಲ್ಲಿಸಿದ್ದರು.

20004ರಲ್ಲಿ ಕಾರ್ಗಿಲ್ ಕಾಫಿನ್ ಗೇಟ್ ಹಗರಣ ವಿಚಾರದಲ್ಲಿ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಆಯೋಗದ ವಿಚಾರಣೆಯಿಂದ ಅವರು ಆರೋಪಮುಕ್ತರಾಗಿ ಹೊರಬಂದರು.
ಅವರ ನಿಧನದಿಂದ ರಾಷ್ಟ್ರ ರಾಜಕಾರಣದಲ್ಲಿ ಹಿರಿಯ ಕೊಂಡಿಯೊಂದು ಕಳಚಿಕೊಂಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ