ಬೆಂಗಳೂರು: ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ದೇಶದ ಹಾಗೂ ರಾಜ್ಯದ ಹಲವು ನಾಯಕರು ಟ್ವಿಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.
“ಜಾರ್ಜ್ ಸಾಹೇಬರು ದೇಶದ ಅತ್ಯುತ್ತಮ ರಾಜಕೀಯ ನಾಯಕರು. ನೇರ ಮತ್ತು ನಿರ್ಭಿತ ನಡೆಯವರು. ಬಡವರು ಮತ್ತು ಕಾರ್ಮಿಕರ ಪರ ಪರಿಣಾಮಕಾರಿಯಾಗಿ ಧ್ವನಿ ಎತ್ತಿದವರು. ಅವರ ಸಾವು ಸಾಕಷ್ಟು ದುಃಖ ತಂದಿದೆ,” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಮತ್ತೊಂದು ಟ್ವೀಟ್ನಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಜೀವನ, ತತ್ವ, ಸಿದ್ಧಾಂತರ ಹಾಗೂ ಬದ್ಧತೆಯನ್ನು ಹಾಡಿ ಹೊಗಳಿದ್ದಾರೆ.
ಮಾಜಿ ಸಂಸದ ಹಾಗೂ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಧನ ತುಂಬಾ ದುಃಖಕರ ವಿಷಯ. ಅವರ ಕುಟುಂಬಕ್ಕೆ ಮತ್ತು ಸ್ನೇಹಿತರಿಗೂ ಈ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೇಳಿಕೊಳ್ಳುತ್ತೇನೆ,” ಎಂದು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಫರ್ನಾಂಡಿಸ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಸಮಾಜವಾದಿ ನಾಯಕನಾಗಿ ಕಾರ್ಮಿಕರ ಪರವಾಗಿ ಫರ್ನಾಂಡಿಸ್ ಮಾಡಿದ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ.
ಮಾಜಿ ಕೇಂದ್ರ ಸಚಿವರಾಗಿದ್ದ ಜಾರ್ಜ್ ಫರ್ನಾಂಡೀಸ್ ಅವರ ನಿಧನ ತೀವ್ರ ದುಃಖವನ್ನುಂಟು ಮಾಡಿದೆ. ಕಾರ್ಮಿಕರು, ಶೋಷಿತರ ಧ್ವನಿಯಾಗಿದ್ದ ಇವರು, ಸರಳತೆಯಿಂದಲೇ ಜನಮನ ಗೆದ್ದಿದ್ದರು. ದೇಶ ಒಬ್ಬ ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಿದೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ. ಇವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.