ನವದೆಹಲಿ: ಸಿಬಿಐ ನ ನೂತನ ನಿರ್ದೇಶಕರಾಗಿ ನೇಮಕಗೊಂಡಿರುವ ರಿಷಿ ಕುಮಾರ ಶುಕ್ಲಾ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ರಿಷಿ ಕುಮಾರ್ ಶುಕ್ಲಾ ಅವರು 1983ರ ಮಧ್ಯಪ್ರದೇಶ ಕೆಡರ್ನ ಐಪಿಎಸ್ ಅಧಿಕಾರಿಯಾಗಿದ್ದು, ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಸತ್ನ ನೇಮಕಾತಿ ಸಮಿತಿ ಅನುಮೋದನೆ ಮೇರೆಗೆ ಈಗ ಸಿಬಿಐ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕೇಂದ್ರ ಸರಕಾರವು ವಿವಾದಾತ್ಮಕ ಬೆಳವಣಿಗೆಯಲ್ಲಿ ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ಕೆಳಗಿಳಿಸಿತ್ತು. ಬಳಿಕ ಜನವರಿ 10ರಂದು ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ಪದಚ್ಯುತಗೊಳಿಸಿದ ಬಳಿಕ ಕೇಂದ್ರ ಸರಕಾರವು ಎಂ. ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿತ್ತು. ಆದರೆ, ಸುಪ್ರೀಂ ಕೋರ್ಟ್ ಈ ನೇಮಕಾತಿಯನ್ನು ಆಕ್ಷೇಪಿಸಿ, ಶೀಘ್ರದಲ್ಲೇ ಪೂರ್ಣ ಪ್ರಮಾಣದ ನಿರ್ದೇಶಕರನ್ನು ಆಯ್ಕೆ ಮಾಡುವಂತೆ ಸರಕಾರಕ್ಕೆ ತಾಕೀತು ಮಾಡಿತ್ತು.ಈ ಹಿನ್ನಲೆಯಲ್ಲಿ ರಿಷಿ ಕುಮಾರ್ ಶುಕ್ಲಾ ಅವರನ್ನು ನೇಮಕ ಮಾಡಿತ್ತು.