ರಾಮನಗರ ಜಿಲ್ಲೆಯ ಭೈರಮಂಗಲ ಜಲಾಶಯದ ನೀರನ್ನು ಶುದ್ದೀಕರಿಸಿ, ರಾಮನಗರ ಮತ್ತು ಕನಕಪುರ ತಾಲೂಕುಗಳ ಕೆಲವು ಭಾಗಗಳಿಗೆ ಪೂರೈಸುವ, 150 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು, ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಅವರು, ರಾಮನಗರದಲ್ಲಿಂದು ಜಿಲ್ಲಾಡಳಿತ ಕಚೇರಿ ಸಂಕೀರ್ಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಎರಡು ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ, ಈಗಾಗಲೇ ಮಾಗಡಿ ತಾಲೂಕಿನ ಶ್ರೀರಂಗಾ ಯೋಜನೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.