ಟೀಂ ಇಂಡಿಯಾ ಮತ್ತು ಆತಿಥೇಯ ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಇಂದು ವೆಲ್ಲಿಂಗ್ಟನ್ನಲ್ಲಿ ನಡೆಯಲಿದೆ.
ಈಗಾಗಲೇ ಏಕದಿನ ಸರಣಿಯನ್ನ ಗೆದ್ದಿರುವ ಟೀಂ ಇಂಡಿಯಾ ಇದೀಗ ಟಿ20 ಸರಣಿಯಲ್ಲೂ ಗೆಲುವಿನ ನಗಲೋಟ ಮುಂದುವರೆಸಲು ನಿರ್ಧರಿಸಿದೆ.
ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು ತಂಡವನ್ನ ಹಿಟ್ಮ್ಯಾನ್ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಈ ಚುಟುಕು ಸರಣಿ ಯುವ ಕ್ರಿಕೆಟಿಗೆರಿಗೆ ತಂಡದಲ್ಲಿ ತಮ್ಮ್ ಸ್ಥಾನವನ್ನ ಭದ್ರ ಮಾಡಿಕೊಳ್ಳಲು ನೆರವಾಗಲಿದೆ. ಯುವ ವಿಕೆಟ್ ಕೀಪರ್ ರಿಷಭ್ ಪಂತ್ಮೊನ್ನೆ ನಡೆದ ಏಕದಿನ ಸರಣಿಯಲ್ಲಿ ಆಡುವ ಅವಕಾಶದಿಂದ ವಂಚಿತರಾಗಿದ್ದರು. ಇದೀಗ ಮುಂಬರುವ ವಿಶ್ವಕಪ್ನಲ್ಲಿ ಸ್ಥಾನ ಪಡೆಯಬೇಕಿದ್ದಲ್ಲಿ ಪಂತ್ ಈ ಸರಣಿಯಲ್ಲಿ ಸಿಡಿಯಬೇಕಿದೆ.
ಇನ್ನು ತಂಡದಲ್ಲಿ ಮತ್ತೊಬ್ಬ ಯುವ ಕ್ರಿಕೆಟಿಗ ಶುಭಮನ್ ಗಿಲ್ ಮೊನ್ನೆ ಕೊನೆಯ ಎರಡು ಏಕದಿನ ಪಂದ್ಯಗಳಲ್ಲಿ ಸ್ಥಾನ ಪಡೆದು ಆಡಿದರು ಆದರೆ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ಬರಲಿಲ್ಲ. ಹೀಗಾಗಿ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ಸ್ಥಾನದಲ್ಲಿ ಅವಕಾಶ ಕೊಡುವ ಸಾಧ್ಯತೆ ತುಂಬ ಇದೆ.
ಇದುವರೆಗೂ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಎಂಟು ಟಿ20 ಪಂದ್ಯಗಳನ್ನಾಡಿವೆ. ಇದರಲ್ಲಿ ಭಾರತ 2 ಪಂದ್ಯಗಳನ್ನ ಮಾತ್ರ ಗೆದ್ದಿದ್ದು ಇನ್ನುಳಿದ 6 ಪಂದ್ಯಗಳಲ್ಲಿ ಸೋಲು ಕಂಡಿವೆ.