ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಹರಿಯಾಣದ ರೊಹ್ಟಕ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ಯೋಜನೆ ರೂಪಿಸಿದ್ದು, ಇದೇ ಕಾರಣಕ್ಕಾಗಿ ಭಾನುವಾರ ನಡೆದ ಹರಿಯಾಣದ ಬಿಜೆಪಿಯ ಕೋರ್ ಕಮಿಟಿಯ ಸಭೆಯಲ್ಲಿ ಸೆಹ್ವಾಗ್ ಭಾಗವಹಿಸಿದ್ದವರು ಎನ್ನಲಾಗಿದೆ.
ರೋಹ್ಟಕ್ನಿಂದ ಸತತ ಮೂರು ಬಾರಿ ಗೆಲುವು ಸಾಧಿಸಿರುವ ಕಾಂಗ್ರೆಸ್ನ ದೀಪೇಂದರ್ ಸಿಂಗ್ ಹೂಡ ಅವರನ್ನು ಸೋಲಿಸಲು ಬಿಜೆಪಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಈ ಹಿನ್ನೆಲೆಯಲ್ಲಿ ಸೆಹ್ವಾಗ್ ಅವರನ್ನು ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸಲಾಗಿದೆ.
ಆದರೆ ಹರಿಯಾಣದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬಾರ್ಲಾ ಅವರು ಈ ಸುದ್ದಿಯನ್ನು ಅಲ್ಲಗೆಳೆದಿದ್ದು, ಸೆಹ್ವಾಗ್ ಇನ್ನೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದುತಿಳಿಸಿದ್ದಾರೆ.
ಆದರೆ ಬಿಜೆಪಿ ಇನ್ನೊಬ್ಬ ನಾಯಕರು, ವೀರೇಂದ್ರ ಸೆಹ್ವಾಗ್ ಅವರಿಗೆ ಟಿಕೆಟ್ ನೀಡುವ ಕುರಿತು ಈಗಾಗಲೇ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆದರೆ, ಅವರು ಇನ್ನೂ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.
ಒಟ್ಟಾರೆ ಲೋಕಸಭಾ ಚುನಾವಣೆಯಲ್ಲಿ ಹರಿಯಾಣದಿಂದ ಸ್ಪರ್ಧಿಸುವ ಮೂಲಕ ಸೆಹ್ವಾಗ್ ರಾಜಕೀಯಕ್ಕೆ ಪ್ರವೇಶ ಮಾಡುತ್ತಾರೆಯೇ ಎಂಬುದನ್ನು ಕಾದುನೊಡಬೇಕಿದೆ.
Virender Sehwag on Haryana BJP probables’ list?