ಮಧ್ಯಪ್ರದೇಶ,ಫೆ.11- ಸುಟ್ಟ ಗಾಯಗಳಿಂದ ನರಳುತ್ತಿದ್ದ ಮಗು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆಕ್ರೋಶ ವ್ಯಕ್ತಡಿಸಿದ್ದಾರೆ.
ಮಧ್ಯ ಪ್ರದೇಶದ ಸಾಗರ್ ಎಂಬಲ್ಲಿ ಒಂದುವರೆ ವರ್ಷದ ಅಂಶಿಕಾ ಎಂಬ ಮಗು ಸುಟ್ಟ ಗಾಯದಿಂದ ಬುಂದೇಲ್ಕಂಡ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಮಗುವಿಗೆ ಚಿಕಿತ್ಸೆ ನೀಡಲು ವೆಂಟಿಲೇಟರ್ ವ್ಯವಸ್ಥೆ ಇಲ್ಲ. ನೀವೇ ಅದನ್ನು ವ್ಯವಸ್ಥೆ ಮಾಡಿಕೊಂಡು ಬನ್ನಿ ಎಂದು ಹೇಳಿ ಚಿಕಿತ್ಸೆ ನೀಡದೇ ಸುಮ್ಮನಾಗಿದ್ದಾರೆ. ಹೀಗಾಗಿ ಮಗು ಮೃತಪಟ್ಟಿದೆ ಎಂದು ಪೋಷಕರ ಆರೋಪಿಸಿದ್ದಾರೆ.
ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ಮಗುವನ್ನ ಕರೆ ತಂದಾಗ ಕರ್ತವ್ಯದಲ್ಲಿದ್ದ ವೈದ್ಯೆ ಪೋಷಕರೊಂದಿಗೆ ಅಮಾನವೀಯವಾಗಿ ನಡೆದುಕೊಂಡಿದ್ದು, ಇದನ್ನ ಅಲ್ಲೇ ಇದ್ದವರು ತಮ್ಮ ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.