ಬೆಂಗಳೂರು,ಫೆ.11-ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ಮಾಜಿ ಸ್ಪೀಕರ್ ಹಾಗೂ ಶಾಸಕ ಕೆ.ಜಿ.ಬೋಪಯ್ಯ ಅವರೊಂದಿಗೆ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಸೃಷ್ಟಿಸಿದೆ.
ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಇಂದು ಯಡಿಯೂರಪ್ಪ ಮತ್ತು ಬೋಪಯ್ಯ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಸಭೆ ನಡೆಸಿದ್ದಾರೆ.
ಇವರಿಬ್ಬರ ಮಾತುಕತೆಯ ವಿವರಗಳು ಸದ್ಯಕ್ಕೆ ಲಭ್ಯವಿಲ್ಲವಾದರೂ ದಿಢೀರನೇ ಭೇಟಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕಾಂಗ್ರೆಸ್ನಿಂದ ದೂರ ಉಳಿದಿರುವ ನಾಲ್ವರು ಶಾಸಕರು ರಾಜೀನಾಮೆ ನೀಡಬೇಕೆ? ಬೇಡವೇ ಎಂಬುದು ಸೇರಿದಂತೆ ಪ್ರಚಲಿತ ವಿದ್ಯಮಾನಗಳ ಬಗ್ಗೆಯೂ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.