ನವದೆಹಲಿ: ದೆಹಲಿಯ ಕರೋಲ್ ಬಾಘ್ನಲ್ಲಿರುವ ಅರ್ಪಿತ್ ಪ್ಯಾಲೇಸ್ ಹೋಟೆಲ್ನಲ್ಲಿ ಇಂದು ಮುಂಜಾನೆ 4:30 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಮೊದಲಿಗೆ ಹೋಟೆಲ್ನ ನಾಲ್ಕನೇ ಅಂತಸ್ತಿನಲ್ಲಿ ಕಾಣಿಸಿಕೊಂಡ ಅಗ್ನಿ ಕ್ಷಣಮಾತ್ರದಲ್ಲಿ ಹೋಟೆಲ್ ಅನ್ನು ಆವರಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 17 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.
ಶಾರ್ಟ್ ಸರ್ಕ್ಯೂಟ್ನಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಬಳಿಕ ಸತ್ಯಾಸತ್ಯತೆ ಬೆಳಕಿಗೆ ಬರಬೇಕಿದೆ.