ಬೆಂಗಳೂರು, ಫೆ.15-ಹುತಾತ್ಮ ಯೋಧ ಎಚ್.ಗುರು ಅವರ ಕುಟುಂಬವರ್ಗಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ.
ದೂರವಾಣಿ ಮೂಲಕ ಗುರು ಅವರ ಕುಟುಂಬದವರನ್ನು ಸಂಪರ್ಕಿಸಿ ಸಾಂತ್ವನ ಹೇಳಿದ್ದಾರೆ.
ನಿನ್ನೆ ಜಮ್ಮು-ಕಾಶ್ವೀರದ ಪುಲ್ವಾಮಾದಲ್ಲಿ ಯೋಧ ಗುರು ಅವರು ಉಗ್ರರ ದಾಳಿಯಲ್ಲಿ ಹುತಾತ್ಮರಾಗಿರುವುದಕ್ಕೆ ತೀವ್ರ ಸಂತಾಪವನ್ನು ಮುಖ್ಯಮಂತ್ರಿ ಸೂಚಿಸಿದ್ದಾರೆ.
ಜಮ್ಮುವಿನಲ್ಲಿ ಭಯೋತ್ಪಾದಕರ ಕುಕೃತ್ಯಕ್ಕೆ ಬಲಿಯಾದ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗುಡಿಗೆರೆಯ ವೀರಯೋಧ ಗುರು ಅವರ ಕುಟುಂಬಕ್ಕೆ ಆಸರೆಯಾಗಿ ನಿಲ್ಲಬೇಕಿದೆ ಎಂದಿರುವ ಮುಖ್ಯಮಂತ್ರಿ, ಈ ನಿಟ್ಟಿನಲ್ಲಿ ಸೂಕ್ತ ಪರಿಹಾರವನ್ನು ದೊರಕಿಸಿಕೊಡಲು ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.