ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದೆ ಅನ್ಯಾಯ:ಬೇಡ ಜಂಗಮ ಪರಿಶಿಷ್ಟಜಾತಿ ರಕ್ಷಣಾ ವೇದಿಕೆ

ಬೆಂಗಳೂರು, ಫೆ.15- ಬೇಡ ಜಂಗಮ ಜಾತಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದೆ ಸೌಲಭ್ಯಗಳಿಂದ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಪುರಭವನದ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.

ಅಖಿಲ ಕರ್ನಾಟಕ ಡಾ.ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

101 ಪರಿಶಿಷ್ಟ ಜಾತಿಗಳಲ್ಲಿ ಬೇಡ ಜಂಗಮ ಕೂಡ ಒಂದಾಗಿದ್ದು, ಹೈಕೋರ್ಟ್, ಸುಪ್ರೀಂಕೋರ್ಟ್ ಈ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡಬೇಕೆಂದು ಆದೇಶ ನೀಡಿವೆ. ಧಾರ್ಮಿಕ ಭಿಕ್ಷಾಟನೆಯ ಆಧಾರದ ಮೇಲೆ ಡಾ.ಅಂಬೇಡ್ಕರ ಸಂವಿಧಾನದಲ್ಲಿ ಬೇಡ ಜಂಗಮವನ್ನು ಎಸ್ಸಿ ಮೀಸಲಾತಿಗೆ ಸೇರಿಸಲಾಗಿದೆ.

ಆದರೆ, ಇದನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಚಿವರು ಪರಿಗಣಿಸುತ್ತಿಲ್ಲ, ಜಿಲ್ಲಾಧಿಕಾರಿಗಳು ಸ್ಪಂದಿಸುತ್ತಿಲ್ಲ. ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದೆ ಅನ್ಯಾಯ ವೆಸಗುತ್ತಾ ಬಂದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ