ಈಶಾನ್ಯ ರಾಜ್ಯ ಮಣಿಪುರದಲ್ಲಿ 12 ಕೋಟಿ ಮೌಲ್ಯದ ಮಾದಕ ವಸ್ತು ವಶ

ಇಂಫಾಲ್, ಮಾ.15- ಈಶಾನ್ಯ ರಾಜ್ಯ ಮಣಿಪುರದ ಟೆಗ್ನೊಪಾಲ್ ಜಿಲ್ಲೆಯಲ್ಲಿ ಕಳ್ಳಸಾಗಣೆದಾರನೊಬ್ಬನನ್ನು ಬಂಧಿಸಿರುವ ಭದ್ರತಾ ಪಡೆಗಳು 12 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.  ಮಂಗಳವಾರ ರಾತ್ರಿ ಮಣಿಪುರ-ಅಸ್ಸಾಂ ಚೆಕ್‍ಪೆÇೀಸ್ಟ್ ಬಳಿ ಆರೋಪಿಯನ್ನು ಬಂಧಿಸಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ರೈಫಲ್ಸ್ ಪ್ರಕಟಣೆ ತಿಳಿಸಿದೆ. ಆರೋಪಿಯನ್ನು ಜಪ್ತಿ ಮಾಡಲಾದ ಮಾಲಿನೊಂದಿಗೆ ಇಂಫಾಲ್‍ನಲ್ಲಿರುವ ಮಾದಕವಸ್ತು ನಿಯಂತ್ರಣ ಮಂಡಳಿ(ಎನ್‍ಸಿಬಿ)ಗೆ ಒಪ್ಪಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ