ಭಾರತೀಯ ಯೋಧರ ಮೇಲೆ ಉಗ್ರರ ದಾಳಿ: ಪಾಕ್ ಪ್ರವಾಸ ಮುಂದೂಡಿದ ಸೌದಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್

ನವದೆಹಲಿ,ಫೆ.17- ಪುಲ್ವಾಮದ ಆವಂತಿಪುರದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರು ನಡೆಸಿರುವ ದಾಳಿ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ತಮ್ಮ ಪಾಕ್ ಪ್ರವಾಸವನ್ನು ಮುಂದೂಡಿದ್ದಾರೆ.

ಮುಂದಿನ ವಾರ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದ್ದು, ಫೆ. 19 ಹಾಗೂ 20ರಂದು ಭೇಟಿ ದಿನಾಂಕ ನಿಗದಿಯಾಗಿದೆ ಎಂದು ಹೇಳಲಾಗಿದೆ.

ಭಾರತದ ಜತೆಗಿನ ರಕ್ಷಣಾ ವ್ಯವಸ್ಶೆ, ಭದ್ರತೆ ಹಾಗೂ ವ್ಯಾಪಾರ, ವಹಿವಾಟು, ಹೂಡಿಕೆ ಕ್ಷೇತ್ರಗಳಲ್ಲಿ ಭಾರತ ಹಾಗೂ ಸೌದಿ ಮಧ್ಯೆ ಸಹಕಾರ ಹೆಚ್ಚಿಸುವ ಸಂಬಂಧ ಸೌದಿ ಪ್ರಿನ್ಸ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಭೇಟಿ ವೇಳೆ ಉಭಯ ದೇಶಗಳ ನಡುವೆ ಪರಸ್ಪರ ಹಿತಾಸಕ್ತಿ ಕುರಿತಂತೆ ಹಲವು ವಿಷಯಗಳು ಬಗ್ಗೆ ವಿಸ್ತೃತವಾದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಪಾಕಿಸ್ತಾನ ಹಾಗೂ ಮಲೇಷಿಯಾ ರಾಷ್ಟ್ರಗಳಿಗೆ ಭೇಟಿ ನಡೆಸಲು ಸೌದಿ ರಾಜ ಚಿಂತನೆ ನಡೆಸಿದ್ದರು. ಆದರೆ ಪುಲ್ವಾಮದಲ್ಲಿ ನಡೆದಿರುವ ಉಗ್ರರ ದಾಳಿಯಿಂದಾಗಿ ಪಾಕ್ ಪ್ರವಾಸವನ್ನು ರದ್ದುಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ